ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ: ಆಸ್ಪತ್ರೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ

Update: 2018-09-20 18:14 GMT

ಬಂಟ್ವಾಳ,ಸೆ.20: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ 8 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ನಡೆಸಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿ ಮಂಗಳೂರಿನ ಖಾಸಗಿ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗುರುವಾರ ರಾತ್ರಿ ಬೇಟಿ ನೀಡಿದರು.

ಪ್ರಕರಣದ ಬಗ್ಗೆ ಪೋಷಕರೊಂದಿಗೆ ಮಾಹಿತಿ ಪಡೆದ ಶಾಸಕರು, ಘಟನೆಯ ಬಗ್ಗೆ ಖಂಡಿಸಿದ್ದಾರೆ.
ಸಂತ್ರಸ್ಥೆಗೆ ನ್ಯಾಯ, ಭದ್ರತೆ ಹಾಗೂ ಸೂಕ್ತ ಪರಿಹಾರ ಒದಗಿಸುವಂತೆ ಮತ್ತು ದುಷ್ಕರ್ಮಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News