ವಳಚ್ಚಿಲ್: ಅಕ್ರಮ ಮರಳು ಸಂಗ್ರಹ ಪತ್ತೆ; 10 ಲಕ್ಷ ರೂ. ಮೌಲ್ಯದ ಸೊತ್ತು ವಶ

Update: 2018-09-21 04:27 GMT

ಮಂಗಳೂರು, ಸೆ.21: ನಗರ ಹೊರವಲಯದ ವಳಚ್ಚಿಲ್ ಬಳಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಮಂಗಳೂರು ಸಹಾಯಕ ಆಯುಕ್ತರ ನೇತೃತ್ವದ ತಂಡ ಭಾರೀ ಪ್ರಮಾಣದ ಮರಳನ್ನು ವಶಪಡಿಸಿಕೊಂಡ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ.

ವಳಚ್ಚಿಲ್‌ನ ಅಡ್ಯಾರ್‌ಪದವು ಎಂಬಲ್ಲಿ ಈ ದಾಳಿ ನಡೆಸಲಾಗಿದೆ. ಈ ಸಂದರ್ಭ ಸುಮಾರು 150 ಲೋಡ್‌ನಷ್ಟು ಮರಳು, ಮರಳುಗಾರಿಕೆಗೆ ಬಳಸುತ್ತಿದ್ದ 8 ಇಂಜಿನ್‌ಗಳು ಹಾಗೂ 5 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇವುಗಳ ಒಟ್ಟು ಮೌಲ್ಯ ಸುಮಾರು 10 ಲಕ್ಷ ರೂ.ಗಳೆಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News