ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Update: 2018-09-21 04:41 GMT

ಶ್ರೀನಗರ, ಸೆ.21: ಜಮ್ಮು ಮತ್ತು ಕಾಶ್ಮೀರದ ಬಂಡೀಪೊರಾ ಜಿಲ್ಲೆಯ ಸುಮುಲಾರ್ ಕಾಡಿನಲ್ಲಿ  ಶುಕ್ರವಾರ ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಕಾಡಿನಲ್ಲಿ ಅಡಗಿರುವ ಉಗ್ರರನ್ನು ಸದೆ ಬಡಿಯಲು ಭಾರತೀಯ ಸೇನೆ, ಸಿಆರ್ ಪಿಎಫ್, ಎಸ್ ಒಜಿ ಮತ್ತು ಕಾಶ್ಮೀರದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಉಗ್ರರನ್ನು ಕೊಂದಿದ್ದಾರೆ.

ಇದೇ ವೇಳೆ ನಾಲ್ವರು ಪೊಲೀಸರನ್ನು  ಮನೆಯಿಂದ ಉಗ್ರರು ಅಪಹರಿಸಿದ್ದಾರೆ ಎಂದು ತಿಳಿದು ಬಂದಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News