ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆಗೈದ ಉಗ್ರರು

Update: 2018-09-21 05:37 GMT

ಶ್ರೀನಗರ, ಸೆ.21: ಜಮ್ಮು ಮತ್ತು ಕಾಶ್ಮೀರದ ಮೂವರು ಪೊಲೀಸರನ್ನು ಉಗ್ರರು ಮನೆಯಿಂದಲೇ ಅಪಹರಿಸಿ ಹತ್ಯೆ ಮಾಡಿರುವ ಘಟನೆ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

ಉಗ್ರರಿಂದ ಹತ್ಯೆಗೀಡಾದ  ಪೊಲೀಸರ ಮೃತದೇಹ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.

ಮೂವರು ಪೊಲೀಸರು ಸೇರಿದಂತೆ ನಾಲ್ವರನ್ನು ಉಗ್ರರು ಅಪಹರಿಸಿದ್ದರು. ಈ ಪೈಕಿ ಪೊಲೀಸ್ ಸಿಬ್ಬಂದಿಯೊಬ್ಬರ ಸಹೋದರನನ್ನು ಉಗ್ರರು ಬಿಡುಗಡೆ ಮಾಡಿದ್ದಾರೆ

ಗುರುವಾರ ರಾತ್ರಿ ಮನೆಗೆ ನುಗ್ಗಿ ಪೊಲೀಸರನ್ನು ಅಪಹರಿಸಿದ್ದರು. ಪೊಲೀಸರನ್ನು ಅಪಹರಿಸಿದ ಬೆನ್ನಲ್ಲೇ ಭದ್ರತಾ ಪಡೆ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರರನ್ನು ಬಂಡೀಪೊರಾದಲ್ಲಿ ಹೊಡೆದುರುಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News