×
Ad

ಮಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿಯ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2018-09-21 20:13 IST

ಮಂಗಳೂರು, ಸೆ.21: ಬಿಜೆಪಿಯ ವಿರುದ್ಧ ದಂಗೆ ಏಳುವಂತೆ ಕರೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯ ಹೇಳಿಕೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮುಂದೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಬೆದರಿಕೆ ಹಾಕಿದುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಾಸಕ ಎಸ್. ಅಂಗಾರ, ನನ್ನ ಆರು ಬಾರಿಯ ಶಾಸಕತ್ವದ ಅವಧಿಯಲ್ಲಿ 9 ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಕುಮಾರಸ್ವಾಮಿ ಅವರಷ್ಟು ಅಸಮರ್ಥ ಸಿಎಂ ಯಾರೂ ಇಲ್ಲ. ಉತ್ತಮ ಆಡಳಿತ ನೀಡಲು ಕುಮಾರಸ್ವಾಮಿ ವಿಲರಾಗಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ತನ್ನ ವೈಲ್ಯ ಮರೆಮಾಚಲು ಅವರು ಈಗ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸಿಎಂ ಅವರ ಬಾಯಿಂದ ದಂಗೆ ಎಂಬ ಪದ ಬರಬಾರದಿತ್ತು. ತಕ್ಷಣ ಅವರು ತನ್ನ ಹೇಳಿಕೆ ಹಿಂಪಡೆದು ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಎಲ್ಲ ತಾಲೂಕುಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮಾಜಿ ಶಾಸಕ ಎನ್. ಯೋಗೀಶ್ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ಮುಖಂಡ ಡಾ. ಅಣ್ಣಯ್ಯ ಕುಲಾಲ್ ಮಾತನಾಡಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪೂಜಾ ಪೈ, ಮನಪಾ ಪ್ರತಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು, ಪಕ್ಷದ ಮುಖಂಡರಾದ ಪ್ರಭಾಮಾಲಿನಿ, ಭಾಸ್ಕರಚಂದ್ರ ಶೆಟ್ಟಿ, ಸಂಜಯ ಪ್ರಭು, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂದೇಶ್ ಶೆಟ್ಟಿ, ಚಂದ್ರಹಾಸ ಉಳ್ಳಾಲ ಮತ್ತಿತರರು ಭಾಗವಹಿಸಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News