ಜಮ್ಮುಕಾಶ್ಮೀರದಲ್ಲಿ ಎನ್‌ಕೌಂಟರ್: ಐವರು ಉಗ್ರರು ಹತ

Update: 2018-09-21 17:46 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ, ಸೆ. 21: ಜಮ್ಮು ಹಾಗೂ ಕಾಶ್ಮೀರದ ಬಂಡಿಪೋರಾದಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರೆ ತಯ್ಯಿಬ ಸಂಘಟನೆಯ ಐದು ಮಂದಿ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸೇನೆ ಹಾಗೂ ಪೊಲೀಸರ ಜಂಟಿ ತಂಡ ಉತ್ತರ ಕಾಶ್ಮೀರದ ಬಂಡಿಪೋರಾದ ಶೋಖಾಬಾ ಪ್ರದೇಶದ ಗುರುವಾರ ಸಂಜೆ ಜಂಟಿ ಕಾರ್ಯಾಚರಣೆ ಆರಂಭಿಸಿತ್ತು. ಇದುವರೆಗೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹತ ಉಗ್ರರ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಕಾರ್ಯಾಚರಣೆ ಮುಂದು ವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News