ಮಂಡ್ಯ: ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣ; ಆರೋಪಿಗಳ ಗಡಿಪಾರಿಗೆ ಬಿವಿಎಸ್ ಒತ್ತಾಯ
ಮಂಡ್ಯ, ಸೆ.21: ಜಾನಕಮ್ಮಳ ಮೇಲಿನ ದೌರ್ಜನ್ಯ ಖಂಡಿಸಿ ಬಹುಜನ ವಿದ್ಯಾರ್ಥಿ ಸಂಘಟನೆ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಗಡೀಪಾರು ಮಾಡಲು ಆಗ್ರಹಿಸಿದರು.
ನಗರದ ವಿವಿಧ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಕೃತ್ಯವನ್ನು ಉಗ್ರವಾಗಿ ಖಂಡಿಸಿದ ಅವರು, ಆರೋಪಿಗಳ ವಿರುದ್ಧ ಕಠಿಣ ಪ್ರಕರಣ ದಾಖಲಿಸಲು ಒತ್ತಾಯಿಸಿದರು.
ಬಸವನಪುರ ಗ್ರಾಮದಲ್ಲಿ ವಾಸವಾಗಿರುವ ಸುಮಾರು 50 ತಮಿಳು ದಲಿತ ಕುಟುಂಬದವರನ್ನು ಜೀತಮುಕ್ತರನ್ನಾಗಿ ಅವರಿಗೆ ಸರಕಾರದ ವತಿಯಿಂದ ಸೌಲಭ್ಯ ಒದಗಿಸಿಕೊಡಬೇಕು ಎಂದು ಅವರು ತಾಕೀತು ಮಾಡಿದರು.
ಕುದುರಗುಂಡಿ ದಲಿತ ಕಾಲನಿಯ ವ್ಯಕ್ತಿ ಮೇಲೆ ಕಲ್ಲು ಎತ್ತಿಹಾಕಿ ಕಾಲು ಮುರಿದಿರುವ ಘಟನೆ ಹಾಗೂ ರೆವಿನ್ಯೂ ಇನ್ಸ್‍ಪೆಕ್ಟರ್ ಮೇಲೆ ಗ್ರಾಪಂ ಸದಸ್ಯನೊಬ್ಬ ಹಲ್ಲೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿಲ್ಲ. ಕೂಡಲೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.
ಬಹುಜನ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಯೋಜಕ ಎಸ್.ಪ್ರಮೋದ್, ಕಾರ್ಯಾಧ್ಯಕ್ಷ ಏಳುಮಲೈ, ಉಪಾಧ್ಯಕ್ಷೆ ಅನುಪಮ, ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣಮೂರ್ತಿ, ಇತರ ಮುಖಂಡರು ಪ್ರತಿಭಟನೆ ನೇತೃತ್ವವಹಿಸಿದ್ದರು.