ಸ್ಯಾನಿಟರಿ ನ್ಯಾಪ್‌ಕಿನ್ ಇನ್ಸಿನರೇಟರ್ ಕೊಡುಗೆ

Update: 2018-09-21 17:49 GMT

ಉಡುಪಿ, ಸೆ.21: ರೋಟರಿ ಅಂಬಲಪಾಡಿ ವತಿಯಿಂದ ರೋಟರಿ ಜಿಲ್ಲೆ 3182ರ ಗವರ್ನರ್ ಅಭಿನಂದನ್ ಶೆಟ್ಟಿ ಅಧಿಕೃತ ಭೇಟಿಯ ಸಂದರ್ಭದಲ್ಲಿ ಉದ್ಯಾವರದ ಎಂಇಟಿ ಆಂಗ್ಲ ಮಾಧ್ಯಮ ಶಾಲೆಗೆ ಸ್ಯಾನಿಟರಿ ನ್ಯಾಪ್‌ಕಿನ್ ಇನ್ಸಿನರೇಟರ್‌ನ್ನು ಇತ್ತೀಚೆಗೆ ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಭಿನಂದನ್ ಶೆಟ್ಟಿ, ರೋಟರಿ ಸಂಸ್ಥೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಚತೆ ಹಾಗೂ ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರೋಟರಿ ಅಂಬಲಪಾಡಿ ವತಿಯಿಂದ ಪರಿಸರದ ಎಲ್ಲಾ ಹೆಣ್ಣುಮಕ್ಕಳ ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇನ್ಸಿನರೇಟರ್‌ನ್ನು ಅಳವಡಿಸುವ ಉದೆ್ದೀಶವನ್ನು ಹೊಂದಲಾಗಿದೆ ಎಂದರು.
ಈ ಸಂದರ್ಭದಲ್ಲಿ ಅಂಬಲಪಾಡಿ ರೋಟರಿ ಅಧ್ಯಕ್ಷ ಖಲೀಲ್ ಅಹ್ಮದ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News