ಭಾರತಕ್ಕೆ ಹ್ಯಾಟ್ರಿಕ್ ಗೆಲುವು

Update: 2018-09-21 18:24 GMT

ದುಬೈ, ಸೆ.21: ಏಶ್ಯಕಪ್ ಕ್ರಿಕೆಟ್ ಟೂರ್ನಮೆಂಟ್‌ನ ಸೂಪರ್ -4 ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

ಇಲ್ಲಿನ ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 174 ರನ್‌ಗಳ ಸವಾಲನ್ನು ಪಡೆದ ಭಾರತ ಇನ್ನೂ 82 ಎಸೆತಗಳು ಬಾಕಿ ಇರುವಾಗಲೇ 3 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಗಳಿಸಿದೆ.

ನಾಯಕ ರೋಹಿತ್ ಶರ್ಮ ಔಟಾಗದೆ 83 ರನ್(104ಎ, 5ಬೌ,3ಸಿ ) , ಆರಂಭಿಕ ದಾಂಡಿಗ ಶಿಖರ್ ಧವನ್ 40 ರನ್ , ಮಹೇಂದ್ರ ಸಿಂಗ್ ಧೋನಿ 33ರನ್ (37ಎ, 3ಬೌ) , ಅಂಬಟಿ ರಾಯುಡು 13 ರನ್ , ದಿನೇಶ್ ಕಾರ್ತಿಕ್ ಔಟಾಗದೆ 1 ರನ್ ಗಳಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

,,,,,,,,,,

 ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಾಂಗ್ಲಾ ತಂಡ 49.1 ಓವರ್‌ಗಳಲ್ಲಿ 173 ರನ್‌ಗಳಿಗೆ ಆಲೌಟಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News