​ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ: ಮಹಿಳಾ ಕಾಂಗ್ರೆಸ್ ಖಂಡನೆ

Update: 2018-09-21 18:52 GMT

ಬಂಟ್ವಾಳ, ಸೆ. 21: ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮಹಿಳಾ ಕಾಂಗ್ರೆಸ್ ಖಂಡಿಸಿದೆ. ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಮಕ್ಕಳು ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯುವಂತಾಗಲು ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿ, ಇನ್ನು ಮುಂದೆ ಯಾರು ಕೂಡ ಇಂತಹ ಘೋರ ಅಪರಾಧವನ್ನು  ಮಾಡುವುದನ್ನು ತಡೆಯುವಂತಾಗಲು ಸೂಕ್ತ  ಕಾನೂನು ಕ್ರಮವನ್ನು  ಕೈಗೊಳ್ಳಬೇಕು ಎಂದು ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ ಪೂಜಾರಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News