ಟ್ಯಾಲೆಂಟ್‌: ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

Update: 2018-09-22 12:13 GMT

ಮಂಗಳೂರು, ಸೆ. 22: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ತಂದೆ/ತಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬ್ಲೂಲೈನ್ ಸೀಫುಡ್ ಆಡಳಿತ ನಿರ್ದೇಶಕ ಶೌಕತ್ ಶೌರಿ, ಡೆಕ್ಕನ್ ಪ್ಲಾಸ್ಟ್‌ನ ಆಡಳಿತ ನಿರ್ದೇಶಕ ಅಸ್ಗರ್ ಹಾಜಿ, ಮಿಸ್ಬಾಹ್ ನಾಲೆಜ್ ಫೌಂಡೇಶನ್‌ನ ಅಧ್ಯಕ್ಷ ಹಾಜಿ ಮುಮ್ತಾಝ್ ಅಲಿ ಕೃಷ್ಣಾಪುರ, ಆಝಾದ್ ಗ್ರೂಪ್‌ನ ಆಡಳಿತ ನಿರ್ದೇಶಕ ಮನ್ಸೂರ್ ಅಹ್ಮದ್, ಮುಕ್ಕ ಸೀಫುಡ್‌ನ ಆಡಳಿತ ನಿರ್ದೇಶಕ ಮುಹಮ್ಮದ್ ಹಾರಿಸ್, ಭಾರತ್ ಕನ್‌ಸ್ಟ್ರಕ್ಷನ್‌ ಆಡಳಿತ ನಿರ್ದೇಶಕ ಮುಸ್ತಫಾ, ನಂಡೆ ಪೆಂಙಳ್ ಅಧ್ಯಕ್ಷ ನೌಷಾದ್ ಹಾಜಿ ಸೂರಲ್ಪಾಡಿ, ವಿಶ್ವಾಸ್ ಎಸ್ಟೇಟ್‌ನ ಪಾಲುದಾರ ಸುಲೈಮಾನ್ ಶೇಖ್ ಬೆಳುವಾಯಿ, ಮುಸ್ತಫಾ ಇಂಜಿನಿಯರ್ ಅಡ್ಡೂರು, ಹುಸೈನ್ ದಾರಿಮಿ ರೆಂಜಲಾಡಿ, ಉದ್ಯಮಿ ರಹ್ಮತುಲ್ಲಾ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ ವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ ಅಬ್ದುಲ್ ಹಮೀದ್ ಕಣ್ಣೂರು ಖಿರಾಅತ್ ಪಠಿಸಿದರು. ಸಂಸ್ಥೆಯ ಅಧ್ಯಕ್ಷ ರಿಯಾಝ್ ಕಣ್ಣೂರು ಸ್ವಾಗತಿಸಿ, ನಕಾಶ್ ಬಾಂಬಿಲ ವಂದಿಸಿದರು.

ಸಂಸ್ಥೆಯ ಸಲಹೆಗಾರ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರೇರಣಾ ತರಗತಿಯನ್ನು ಭಾರತ್ ಕನ್‌ಸ್ಟ್ರಕ್ಷನ್‌ ಆಡಳಿತ ನಿರ್ದೇಶಕ ಮುಸ್ತಫಾ ನಡೆಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News