ಬಿ.ಸಿ.ರೋಡ್: ಯುವ ಕಾಂಗ್ರೆಸ್ ವತಿಯಿಂದ ಧರಣಿ

Update: 2018-09-22 12:59 GMT

ಬಂಟ್ವಾಳ, ಸೆ. 22: ಗೂಡಿನಬಳಿ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ, ಸಂತ್ರಸ್ತ ಕುಟುಂಬಕ್ಕೆ ಕಾನೂನು ರಕ್ಷಣೆ, ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‍ನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಶನಿವಾರ ಧರಣಿ ನಡೆಯಿತು.

ಈ ಸಂದರ್ಭ ಗೂಡಿನಬಳಿ ಬಾಲಕಿಯ ಮೇಲಾದ ಲೈಂಗಿಕ ಪ್ರಕರಣವನ್ನು ತೀವ್ರವಾಗಿ ಖಂಡಿಸಲಾಯಿತು. ಅಪ್ರಾಪ್ತ ಬಾಲಕಿಯ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಕಾನೂನು ರಕ್ಷಣೆ, ಪರಿಹಾರ ಒದಗಿಸಬೇಕು. ಪ್ರಕರಣಕ್ಕೆ ಕುಮ್ಮಕ್ಕು ನೀಡಿರುವ ಆರೋಪಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಗಳನ್ನು ನಡೆಸಬೇಕು. ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವ ಸಂಘಟನೆ ವ್ಯಕ್ತಿಗಳನ್ನು ಕೂಡ ಶಿಕ್ಷೆಗೆ ಒಳಪಡಿಸಬೇಕೆಂದು ಮನವಿ ಮೂಲಕ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್,  ಜಿಲ್ಲಾ ಯುವಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮನ್, ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೇಬಿ ಕುಂದರ್, 
ಚಿತ್ತರಂಜನ್ ಶೆಟ್ಟಿ, ವಾಸು ಪೂಜಾರಿ, ಗಂಗಾಧರ ಪೂಜಾರಿ, ಜನಾರ್ಧನ ಚೆಂಡ್ತಿಮಾರ್, ಅಬೂಬಕರ್ ಸಿದ್ದೀಕ್, ಸುದೀಪ್ ಆಳ್ವ, ವಿಶ್ವನಾಥ್ ಗೌಡ ಮಣಿ, ಮುಹಮ್ಮದ್ ಶರೀಫ್, ಮುಹಮ್ಮದ್ ಇರ್ಷಾದ್, ಜೆಸಿಂತಾ, ಗಾಯತ್ರಿ ಪ್ರಕಾಶ್, ವೇದಾವತಿ, ರಿಯಾಜ್ ಹುಸೈನ್ ಕೆಳಗಿನ ಪೇಟೆ, ಮುಹಮ್ಮದ್ ನಂದಾವರ, ಸುಧೀರ್ ಶೆಟ್ಟಿ ಇರ್ವತ್ತೂರು, ಪ್ರೀಯರಾಜ್ ಬಂಟ್ವಾಳ, ರಮೇಶ ಕುಲಾಲ್, ಮಹೇಶ್ ನಾಯಕ್, ದಿವಾಕರ ಪೂಜಾರಿ, ಭರತ್ ಪೂಜಾರಿ, ಕಿಶೋರ್ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News