ವಾಣಿಜ್ಯ ವಿಭಾಗದಲ್ಲಿ ಸಮಾಜಶಾಸ್ತ್ರ ಐಚ್ಛಿಕ ವಿಷಯವಾಗಿ ಅಳವಡಿಕೆ

Update: 2018-09-22 14:16 GMT

ಬೆಂಗಳೂರು, ಸೆ.22: ಪದವಿಪೂರ್ವ ಶಿಕ್ಷಣದ ವಾಣಿಜ್ಯ ವಿಭಾಗದಲ್ಲಿ ಸಮಾಜಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ಅಳವಡಿಸಿ 2019-20ನೆ ಸಾಲಿನಿಂದ ಜಾರಿಗೆ ಬರುವಂತೆ ಸರಕಾರ ಆದೇಶ ಹೊರಡಿಸಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಕೌಂಟೆನ್ಸಿ, ಬ್ಯುಸಿನೆಸ್ ಸ್ಟಡಿ, ಸ್ಟಾಟಿಸ್ಟಿಕ್ಸ್, ಅರ್ಥಶಾಸ್ತ್ರ ಮತ್ತು ಭೂಗೋಳಶಾಸ್ತ್ರ ವಿಷಯಗಳನ್ನು ಐಚ್ಛಿಕ ವಿಷಯಗಳನ್ನಾಗಿ ಕಲಿಯುತ್ತಿದ್ದಾರೆ. ಇನ್ನು ಮುಂದೆ ಇದರ ಸಾಲಿಗೆ ಸೋಶಿಯಾಲಜಿ ಸೇರಿಕೊಳ್ಳಲಿದೆ. ಸಮಾಜಶಾಸ್ತ್ರ ವಿಷಯವು 1979-80ರವರೆಗೆ ವಾಣಿಜ್ಯ ವಿಭಾಗದಲ್ಲಿ ಐಚ್ಛಿಕ ವಿಷಯವಾಗಿತ್ತು. ನಂತರದಲ್ಲಿ ಏಕಾಏಕಿ ಕೈ ಬಿಡಲಾಯಿತು. ಹೀಗಾಗಿ ವಿದ್ಯಾರ್ಥಿಗಳಿಗೆ ಸಮಾಜಶಾಸ್ತ್ರ ವಿಷಯವು ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞರು, ಹಿರಿಯ ಉಪನ್ಯಾಸಕರು, ಪ್ರಾಂಶುಪಾಲರು ಪದವಿಪೂರ್ವ ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಲಾಗಿತ್ತು.

ಸದ್ಯ ಸಮಾಜಶಾಸ್ತ್ರದಲ್ಲಿ 1160 ಹುದ್ದೆಗಳು ಮಂಜೂರಾಗಿದ್ದು, ಸದರಿ ವಿಷಯವನ್ನು ವಾಣಿಜ್ಯ ವಿಭಾಗದಲ್ಲಿ ಒಂದು ಐಚ್ಛಿಕ ವಿಷಯವನ್ನಾಗಿ ಸೇರ್ಪಡೆ ಮಾಡಿದರೆ ಯಾವುದೆ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ. ಹೀಗಾಗಿ ಸರಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ವಾಣಿಜ್ಯ ವಿಭಾಗದಲ್ಲಿ 2019-20ನೆ ಸಾಲಿನಿಂದ ಸಮಾಜಶಾಸ್ತ್ರವನ್ನು ಐಚ್ಛಿಕ ವಿಷಯವನ್ನಾಗಿ ಅಧ್ಯಯನ ನಡೆಸಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶೇಖರ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News