ಸೆ. 23: ಜಿಲ್ಲಾ ಮಟ್ಟದ ಯುವಜನೋತ್ಸವ
Update: 2018-09-22 19:59 IST
ಉಡುಪಿ, ಸೆ. 22: ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಸೆ.23ರ ರವಿವಾರ ಬೆಳಗ್ಗೆ 11 ಕ್ಕೆ ಅಜ್ಜರಕಾಡಿನ ಪುರಭವನ ದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.