ಶಕ್ತಿ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Update: 2018-09-22 15:31 GMT

ಮಂಗಳೂರು, ಸೆ.22: ನಗರದ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ತರಗತಿ ಸಂವಹನ ಕಲೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ವಿಷಯದ ಕುರಿತು ಶಾಲೆಯ ಶಿಕ್ಷಕರಿಗಾಗಿ ಕಾರ್ಯಗಾರವು ಶನಿವಾರ ಜರುಗಿತು.

ಕರಾವಳಿ ಕಾಲೇಜಿನ ಉಪನ್ಯಾಸಕಿ ಮಾಧುರಿ ಶ್ರೀರಾಮ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಗತಿ ನೀಡಿದರು. ಆಸರೆ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷೆ ಡಾ.ಆಶಾ ಜ್ಯೋತಿ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಕ್, ಆಡಳಿತ ಮಂಡಳಿತಯ ಸದಸ್ಯೆ ಸಗುಣಾ ಸಿ. ನಾಕ್, ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಮಾರ್ಗದರ್ಶಕ ರಮೇಶ್ ಕೆ., ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು, ಶ್ರೀ ಗೋಪಾಲಕೃಷ್ಣ ಪ್ರಿ ಸ್ಕೂಲ್‌ನ ನೀಮಾ ಸಕ್ಸೇನಾ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್. ಸ್ವಾಗತಿಸಿದರು. ಶಾಲಾ ಶಿಕ್ಷಕಿ ಅಶ್ವಿತಾ ವಂದಿಸಿದರು. ಶಶಿಕಲಾ ಎಂ.ಎನ್. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News