ಸೆ.25ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2018-09-22 16:58 GMT

ಬೆಂಗಳೂರು, ಸೆ.22: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೆ.25ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಉಭಯ ಸದನಗಳ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಆಪರೇಷನ್ ಕಮಲ, ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆ, ಸಚಿವ ಸಂಪುಟ ವಿಸ್ತರಣೆ, ನಿಗಮ, ಮಂಡಳಿಗಳಿಗೆ ನೇಮಕ, ಲೋಕಸಭಾ ಚುನಾವಣೆಯ ಸಿದ್ಧತೆಗಳು ಸೇರಿದಂತೆ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಪಕ್ಷದಲ್ಲಿ ತಲೆದೋರಿರುವ ಭಿನ್ನಮತ, ಆಂತರಿಕ ಕಲಹ, ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಲು ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಈ ಸಭೆಯನ್ನು ಕರೆಯಲಾಗಿದೆ ಎನ್ನಲಾಗಿದೆ. ವಿಧಾನಪರಿಷತ್ತಿನ ಚುನಾವಣೆಯಲ್ಲಿ ಅತೃಪ್ತ ಶಾಸಕರು ಅಡ್ಡಮತದಾನ ಮಾಡಬಹುದಾದ ಆತಂಕ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಆದುದರಿಂದ, ಇದಕ್ಕೆ ಅಗತ್ಯ ಕಾರ್ಯತಂತ್ರ ರೂಪಿಸಲು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News