ಹಾಸನ: ಐಸ್ ಕ್ರೀಂ ಫ್ಯಾಕ್ಟರಿ ಉದ್ಘಾಟನೆ ಮಾಡಿದ ಸಿಎಂ ಕುಮಾರಸ್ವಾಮಿ

Update: 2018-09-23 07:19 GMT

ಹಾಸನ, ಸೆ. 23: ಹಾಲು ಒಕ್ಕೂಟದ ವತಿಯಿಂದ  556.20 ಕೋಟಿ ರೂ ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು  ಚಾಲನೆ ನೀಡಿದರು.

ಹಾಸನ ಹಾಲು ಒಕ್ಕೂಟ ವತಿಯಿಂದ ರೂ 556.20 ಕೋಟಿಗಳ (ರೂ. 37 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ನೂತನ ಐಸ್ ಕ್ರೀಂ ಉತ್ಪಾದನಾ ಘಟಕದ ಉದ್ಘಾಟನೆ, ರೂ. 279 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಮತ್ತು ಹಾಲಿನಪುಡಿ ಘಟಕ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ, ರೂ.136 ಕೋಟಿ ವೆಚ್ಚದಲ್ಲಿ ಯು.ಎಚ್.ಟಿ. ಸುವಾಸಿತ ಹಾಲಿನ ಪೆಟ್ ಬಾಟಲ್ ಘಟಕ ನಿರ್ಮಾಣದ ಶಂಕುಸ್ಥಾಪನೆ, ರೂ.67 ಕೋಟಿ ವೆಚ್ಚದಲ್ಲಿ ಯು.ಹೆಚ್.ಟಿ. ಘಟಕದ ಉತ್ಪಾದನಾ ಸಾಮರ್ಥ್ಯ 2 ರಿಂದ 4 ಲಕ್ಷ ಲೀಗಳಿಗೆ ವಿಸ್ತರಣೆಗೆ ಶಂಕುಸ್ಥಾಪನೆ, ರೂ. 23 ಕೋಟಿ ವೆಚ್ಚದಲ್ಲಿ ಹಾಸನ ಡೈರಿ ಸಂಸ್ಕರಣಾ ಸಾಮರ್ಥ್ಯ 3 ರಿಂದ 5 ಲಕ್ಷ ಲೀ.ಗಳಿಗೆ ವಿಸ್ತರಣೆಗೆ ಶಂಕುಸ್ಥಾಪನೆ,4.5 ಕೋಟಿ  ರೂ. ವೆಚ್ಚದಲ್ಲಿ ಎಸ್.ಎಂ.ಒಇ ಗೋದಾಮು ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, 4.8 ಕೋಟಿ ರೂ. ವೆಚ್ಚದಲ್ಲಿ ಉಗ್ರಾಣ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, 3.5 ಕೋಟಿ ರೂ. ವೆಚ್ಚದಲ್ಲಿ ಆಡಳಿತ ಕಚೇರಿ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, 1.4 ಕೋಟಿ ರೂ. ವೆಚ್ಚದಲ್ಲಿ ಉಪಹಾರ ಗೃಹ  ಕಟ್ಟಡ ನಿರ್ಮಾಣದ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಾಲನೆ ನೀಡಿದರು.

ಈ ಸಂದರ್ಭ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಚಿವರಾದ ಎಚ್.ಡಿ‌ ರೇವಣ್ಣ, ಜಿಟಿ ದೇವೇಗೌಡ, ಸಾ.ರಾ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News