ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಷ್ಟವಿಲ್ಲ: ಸ್ಪೀಕರ್ ರಮೇಶ್‌ ಕುಮಾರ್

Update: 2018-09-23 15:01 GMT

ಬೆಂಗಳೂರು, ಸೆ.23: ವಿಧಾನಸಭಾಧ್ಯಕ್ಷರ ಸ್ಥಾನದಲ್ಲಿ ಕೂತ ಮೇಲೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಇಷ್ಟ ಪಡುವುದಿಲ್ಲವೆಂದು ಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ತಿಳಿಸಿದರು.

ರವಿವಾರ ನಾದೋಪಾಸನ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಒಳಿತು ಮಾಡು ಮನುಜ-ಸಂಗೀತ ಸಂಜೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷ ಸ್ಥಾನದಲ್ಲಿ ಕೂತ ಕಳೆದ 4ತಿಂಗಳಿಂದ ಯಾವ ಸಾರ್ವಜನಿಕ ಕಾರ್ಯಕ್ರಮದಲ್ಲೂ ಭಾಗವಹಿಸಿಲ್ಲವೆಂದು ತಿಳಿಸಿದರು.

ಯಾವ ಸಾರ್ವಜನಿಕ ಕಾರ್ಯಕ್ರಮದಲ್ಲೂ ಭಾಗವಹಿಸಲು ಇಷ್ಟ ಪಟ್ಟಿರಲಿಲ್ಲ. ಆದರೆ, ವೃದ್ಧರು, ಅಂಧರು ಹಾಗೂ ಅನಾಥರ ಸಹಾಯಾರ್ಥವಾಗಿ ಆಯೋಜಿಸಿದ್ದ ಕಾರ್ಯಕ್ರಮವಾಗಿದ್ದರಿಂದ ಭಾಗವಹಿಸಲು ನಿರ್ಧರಿಸಿದೆ. ಸುದುದ್ದೇಶದ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ವ್ಯಕ್ತಿಯ ಸಹಾಯ ಅಗತ್ಯವಾಗಿರುತ್ತದೆ ಎಂದು ಅವರು ಹೇಳಿದರು.

ಜನತೆ ತಾವಾಗಿಯೆ ಸಮಾಜ ಕಾರ್ಯಕ್ಕೆ ಮುಂದಾಗುವುದಿಲ್ಲ. ಅವರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾದೋಪಸನ ಸಂಸ್ಥೆಯು ಆಯೋಜಿಸಿರುವ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಜನತೆ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ನಾದೋಪಸನ ಸಂಸ್ಥೆಯ ಅಧ್ಯಕ್ಷ ಡಿ.ಉದಯಶಂಕರ್ ಮಾತನಾಡಿ, ವೃದ್ಧರು, ಅನಾಥರು ಹಾಗೂ ವಿಕಲಚೇತನರು ನಮ್ಮ ಸಮಾಜದ ಭಾಗವಾಗಿದ್ದಾರೆ. ಅವರೆಲ್ಲರೂ ಚೆನ್ನಾಗಿದ್ದರೆ ಮಾತ್ರ ನಾವೆಲ್ಲರೂ ಚೆನ್ನಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಅವರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News