ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Update: 2018-09-23 15:06 GMT

ಬೆಂಗಳೂರು, ಸೆ.23: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜೆ.ಪಿ.ನಗರ 6ನೆ ಹಂತ, ರಾಯಲ್ ಸ್ಕೂಲ್ ಸಮೀಪದ ನಿವಾಸಿ ಸಿರೀಶಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎನ್ನಲಾಗಿದೆ.

ಆಂಧ್ರಪ್ರದೇಶದ ಮೂಲದವರಾದ ಸಿರೀಶಾ ನಗರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಇ. ಪದ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಸಂಜೆ 7:30ರಿಂದ 8:30ರ ಮಧ್ಯೆ ಅವಳು ಮನೆಯಲ್ಲೇ ಫ್ಲಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News