ಉತ್ತಮ ಆರೋಗ್ಯಕ್ಕಾಗಿ ನಡಿಗೆಯ ಅಭ್ಯಾಸ ಬೆಳೆಸಿಕೊಳ್ಳಿ: ಡಾ.ಮೃತ್ಯುಂಜಯಸ್ವಾಮಿ

Update: 2018-09-23 15:09 GMT

ಬೆಂಗಳೂರು, ಸೆ.23: ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಶತಾಯು ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ ಮೃತ್ಯುಂಜಯ ಸ್ವಾಮಿ ಅಭಿಪ್ರಾಯಪಟ್ಟರು.

ರವಿವಾರ ನಗರದ ಮಹಾಲಕ್ಷ್ಮೀಪುರಂನಲ್ಲಿರುವ ಶತಾಯು ಆಯುರ್ವೇದ ಚಿಕಿತ್ಸಾ ಕೇಂದ್ರದ ವತಿಯಿಂದ ಇಂದು ಆಯೋಜಿಸಲಾಗಿದ್ದ ಶತಾಯು ಸ್ವಾಸ್ಥ್ಯ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶತಾಯು ಆಯುರ್ವೇದ ದೇಶದಲ್ಲಿ ಪ್ರಾಚೀನ ಚಿಕಿತ್ಸಾ ಪದ್ದತಿಯಾದ ಆಯುರ್ವೇದದ ಮಹತ್ವವನ್ನು ಸಾರುತ್ತಿದೆ. ಈ ಪದ್ದತಿಯನ್ನು ದೇಶದ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಜಾಗತಿ ಮೂಡಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದರು. ನಡಿಗೆ ಆರೋಗ್ಯಕರ ಜೀವನಕ್ಕೆ ಹಾಗೂ ಬೊಜ್ಜನ್ನು ಕರಗಿಸಲು ಅತ್ಯಂತ ಸುಲಭ ಮತ್ತು ಸರಳ ವಿಧಾನವಾಗಿದೆ. ಪ್ರತಿನಿತ್ಯ ಕನಿಷ್ಠ 30 ನಿಮಿಷಗಳ ಕಾಲ ನಡಿಗೆಯಲ್ಲಿ ತೊಡಗಿಕೊಳ್ಳುವ ಅಭ್ಯಾಸವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು.

ಕಳೆದ ಹಲವು ವರ್ಷಗಳಿಂದ ಆಯುರ್ವೇದ ಚಿಕಿತ್ಸಾ ಕ್ರಮಗಳು ಸೇರಿದಂತೆ ಇನ್ನಿತರೆ ಜೀವನ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಶತಾಯು ಆಯುರ್ವೇದ ಕ್ಲಿನಿಕ್ ಸಾರ್ವಜನಿಕರಿಗೆ ಆಯುರ್ವೇದದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಸೆಪ್ಟಂಬರ್ 23 ರಿಂದ 25 ರವರೆಗೆ ಉಚಿತ ಸಲಹಾ ಶಿಬಿರವನ್ನು ಆಯೋಜಿಸಿದೆ ಎಂದು ಮಾಹಿತಿ ನೀಡಿದರು. ಮಹಾಲಕ್ಷ್ಮಿಲೇಔಟ್‌ನಲ್ಲಿ ನಡೆದ ವಾಕಾಥಾನ್‌ನಲ್ಲಿ ನೂರಾರು ಜನರು ಭಾಗವಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News