ರಾಜಸ್ಥಾನದಲ್ಲಿ ಮೊದಲ ಝೀಕಾ ವೈರಸ್ ಸೋಂಕು

Update: 2018-09-23 15:14 GMT

ಜೈಪುರ, ಸೆ. 23: ಜೈಪುರದ ವೃದ್ಧೆಯ ಪರೀಕ್ಷೆ ವೇಳೆ ಝೀಕಾ ವೈರಸ್ ಕಂಡು ಬಂದಿದೆ. ಇದು ರಾಜ್ಯದಲ್ಲಿ ಕಂಡು ಬರುತ್ತಿರುವ ಮೊದಲ ಪ್ರಕರಣ ಎಂದು ಇಲ್ಲಿನ ವೈದ್ಯಕೀಯ ಕಾಲೇಜಿನ ಅಧಿಕಾರಿಗಳು ತಿಳಿಸಿದ್ದಾರೆ.

ಗಂಟು ನೋವು, ಕೆಂಪು ಕಣ್ಣು ಹಾಗೂ ನಿಶ್ಯಕ್ತಿ ಹಿನ್ನಲೆಯಲ್ಲಿ ಮಹಿಳೆಯನ್ನು ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಸೆಪ್ಟಂಬರ್ 11ರಂದು ದಾಖಲಿಸಲಾಗಿತ್ತು. ಡೆಂಗ್ ಹಾಗೂ ಹಂದಿ ಜ್ವರದ ಬಗ್ಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿತ್ತು. ಶಂಕೆಯ ಮೇಲೆ ರಕ್ತದ ಮಾದರಿಯನ್ನು ಝೀಕಾ ಪರೀಕ್ಷೆಗೆ ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಿ ಕೊಡಲಾಗಿತ್ತು. ರಕ್ತ ಪರೀಕ್ಷೆ ವರದಿಯಲ್ಲಿ ಝೀಕಾ ಸೋಂಕು ದೃಢಪಟ್ಟಿದೆ ಎಂದು ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಯು.ಎಸ್ ಅಗರ್‌ವಾಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕಂಡು ಬರುತ್ತಿರುವ ಮೊದಲ ಝೀಕಾ ವೈರಸ್ ಪ್ರಕರಣ ಇದಾಗಿದೆ. ಇಲ್ಲಿನ ಶಾಸ್ತ್ರಿ ನಗರ ನಿವಾಸಿಯಾಗಿರುವ ಮಹಿಳೆಯನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು ಎಂದು ಅಗರ್‌ವಾಲ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News