ಮಂಗಳೂರು: ಯೆನೆಪೊಯ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಫಿಸಿಯೋಥೆರಪಿ ದಿನ

Update: 2018-09-23 15:19 GMT

ಮಂಗಳೂರು, ಸೆ.23: ನಗರದಲ್ಲಿರುವ ಯೆನೆಪೊಯ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಫಿಸಿಯೋಥೆರಪಿ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.

ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದೇಶದ ಶ್ರೇಷ್ಠ ಅಥ್ಲೀಟ್ ವರ್ಷಾ ರೋಹಿತ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ.ಯು.ಟಿ.ಇಫ್ತಿಕಾರ್ ಅಲಿ ಭಾಗವಹಿಸಿದ್ದರು.

ಯೆನೆಪೊಯ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಮುಹಮ್ಮದ್ ತಾಹಿರ್, ತಜ್ಞ ವೈದ್ಯರಾದ ಡಾ.ದೀಪಕ್ ರೈ, ಡಾ.ಅಶ್ವಿನಿ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

ಫಿಸಿಯೋಥೆರಪಿ ವಿಭಾಗದ ಮುಖ್ಯಸ್ಥ ಡಾ.ರಮ್ಯ ದಿಕ್ಸೂಚಿ ಭಾಷಣ ಮಾಡಿದರು.

ಡಾ.ಅನಿಸ್, ಡಾ.ಯಾಸ್ಮಿನ್, ಡಾ.ಅಶ್ವಿನ್ ಫಿಸಿಯೋಥರೆಪಿಯ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News