ಅಪರಿಚಿತ ವಾಹನ ಢಿಕ್ಕಿ: ಮಹಿಳೆ ಮೃತ್ಯು

Update: 2018-09-24 13:29 GMT

ಬೆಂಗಳೂರು, ಸೆ.24: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಉಣ್ಣಮಲೈ(58) ಮೃತಪಟ್ಟ ಪಾದಚಾರಿ ಎಂದು ಪೊಲಿಸರು ತಿಳಿಸಿದ್ದಾರೆ.

ರಾಜಾಜಿನಗರದಲ್ಲಿ ವಾಸವಾಗಿದ್ದ ಉಣ್ಣಮಲೈ ರವಿವಾರ ರಾತ್ರಿ 10 ಗಂಟೆ ಸುಮಾರಿಗೆ ಬಸ್‌ನಿಂದ ಇಳಿದು ಬೆಂಗಳೂರು ಬಳ್ಳಾರಿ ರಸ್ತೆಯ ಐಎಎ್ ಗೇಟ್ ಸಮೀಪ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ವಾಹನವೊಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಅಪಘಾತವೆಸಗಿದ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ. ಈ ಬಗ್ಗೆ ಯಲಹಂಕ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News