ಜಮ್ಮು ಕಾಶ್ಮೀರ: ಪ್ರವಾಹಕ್ಕೆ ಸಿಲುಕಿದ್ದ 29 ಮಂದಿಯ ರಕ್ಷಣೆ

Update: 2018-09-24 13:54 GMT

ಜಮ್ಮು, ಸೆ.24: ಸೋಮವಾರ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಸಿಲುಕಿದ್ದ 29 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಥುವಾ ಜಿಲ್ಲೆಯ ನಗ್ರಿ, ಚಬ್ಬೆ ಚಾಕ್, ಜಖೋಲೆ ಮತ್ತು ಬಿಲ್ವಾರ್ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ್ದವರನ್ನು ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ ರಕ್ಷಿಸಿದೆ. ರಕ್ಷಿಸಲ್ಪಟ್ಟವರಲ್ಲಿ 10 ಮಕ್ಕಳು ಹಾಗೂ 6 ಮಹಿಳೆಯರು ಸೇರಿದ್ದಾರೆ . ಅಲ್ಲದೆ ಜಾನುವಾರುಗಳನ್ನೂ ಸುರಕ್ಷಿತ ಪ್ರದೇಶಕ್ಕೆ ಸಾಗಿಸಲಾಗಿದೆ ಎಂದವರು ತಿಳಿಸಿದ್ದಾರೆ. ಈ ಮಧ್ಯೆ, ರವಿವಾರ ಭಾರೀ ಭೂಕುಸಿತದಿಂದ ಮುಚ್ಚಲಾಗಿದ್ದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಸೋಮವಾರ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಹಲವು ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪೊಲೀಸ್ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ದೋಡಾ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಆದೇಶಿಸಲಾಗಿದ್ದು ನಿಯಂತ್ರಣಾ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News