ಪೂಂಜಾಲಕಟ್ಟೆ: ದ್ವಿಚಕ್ರ ವಾಹನದಲ್ಲಿ ಅಕ್ರಮ ಸ್ಫೋಟಕಗಳ ಸಾಗಾಟ ಪತ್ತೆ

Update: 2018-09-24 14:08 GMT
ಚಿನ್ನಸ್ವಾಮಿ

ಬಂಟ್ವಾಳ, ಸೆ. 24: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಕೆದ್ದಳಿಕೆ ಎಂಬಲ್ಲಿ ಸೋಮವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಕುಕ್ಕಳ ಗ್ರಾಮದ ಪೂಂಜಾಲಕಟ್ಟೆ-ಬಸವನಗುಡಿ ನಿವಾಸಿ ಚಿನ್ನಸ್ವಾಮಿ (70) ಬಂಧಿತ ಆರೋಪಿ. ಬಂಧಿತನಿಂದ 15 ಜಿಲೆಟಿನ್‍ಕಡ್ಡಿಗಳು, 99 ಡಿಟೋನೇಟರ್ ಮತ್ತು ಸಾಗಾಟ ಮಾಡಲು ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 1,05,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಮತ್ತು ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸೂಕ್ತ ಕಾನೂನು ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ಅವರು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯ ವಿವರ:
ಸೆ. 24ರಂದು ಮಂಗಳೂರು ಪಿಐ-ಡಿಸಿಐಬಿ ಸುನೀಲ್ ವೈ ನಾಯಕ್ ಅವರು ತನ್ನ ಸಿಬ್ಬಂದಿಗಳೊಂದಿಗೆ ಬಿ.ಸಿ.ರೋಡ್, ಬಂಟ್ವಾಳ, ಪೂಂಜಾಲಕಟ್ಟೆ ಕಡೆಗಳಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದರು.
ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಕಪ್ಪು ಬಣ್ಣದ ದ್ವಿಚಕ್ರ ವಾಹನವೊಂದರಲ್ಲಿ ನೆಲ್ಲಿಗುಡ್ಡೆಯಿಂದ ಪೂಂಜಾಲಕಟ್ಟೆ ಕಡೆಗೆ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದೇ ವೇಳೆ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸರು ಪುಂಜಾಲಕಟ್ಟೆಯಿಂದ ಎನ್.ಸಿ.ರೋಡ್‍ನಿಂದಾಗಿ ನೆಲ್ಲಿಗುಡ್ಡೆ ಕಡೆಗೆ ಹೋಗುತ್ತಿದ್ದು, ಕೆದ್ದಳಿಕೆ ಸ.ಹಿ.ಪ್ರಾ ಶಾಲೆಯ ಸಮೀಪ ದ್ವಿಚಕ್ರ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿವೆ. ಈ ಸಂದರ್ಭ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ದಸ್ತಗಿರಿ ಮಾಡಿದ್ದು, ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ಅವರು ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಪತ್ತೆಕಾರ್ಯವನ್ನು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್ ರವಿಕಾಂತೇ ಗೌಡ ಅವರ ಮಾರ್ಗದರ್ಶನದಲ್ಲಿ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಸಜಿತ್ ಸೂಚನೆಯಂತೆ ಡಿಸಿಐಬಿ ಪೊಲೀಸ್ ನಿರೀಕ್ಷಕ ಸುನೀಲ್ ವೈ ನಾಯಕ್ ಅವರ ನೇತೃತ್ವದ ತಂಡದಲ್ಲಿ ಸಿಬ್ಬಂದಿಗಳಾದ ನಾರಾಯಣ, ವಾಸು ನಾಯ್ಕ, ಲಕ್ಷ್ಮಣ ಕೆ.ಜಿ, ಇಕ್ಬಾಲ್, ಉದಯ ಗೌಡ, ಉದಯ ರೈ, ಪ್ರವೀಣ್ ಎಂ, ತಾರಾನಾಥ್ ಎಸ್, ಶೋನ್ ಶಾ, ಸುರೇಶ್ ಕುಮಾರ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News