ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ

Update: 2018-09-24 14:22 GMT

ಮಂಗಳೂರು, ಸೆ.24: ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 28ನೆ ಮಹಾಸಭೆಯು ಬಂದರ್‌ನ ಮುಸ್ಲಿಂ ಸೆಂಟ್ರಲ್ ಕಮಿಟಿಯ ಹಾಲ್‌ನಲ್ಲಿ ಇತ್ತೀಚೆಗೆ ಜರುಗಿತು. ಸೊಸೈಟಿಯ ಅಧ್ಯಕ್ಷ ಹಾಜಿ ಬಿ. ಇಬ್ರಾಹೀಂ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಶೇ.9 ಡಿವಿಡೆಂಟ್ ಘೋಷಿಸಲಾಯಿತು. ಕಾರ್ಯದರ್ಶಿ ಶೆರೀನ್ ಬಾನು ವರದಿ ವಾಚಿಸಿದರು. ಸಂಘದ ನಿರ್ದೇಶಕ ಹಾಜಿ ಅಬ್ದುಲ್ ಸಲಾಂ, ಅಬ್ದುಲ್ ರಝಾಕ್ ಎಂ., ನಿಸಾರ್ ಫಕೀರ್ ಮುಹಮ್ಮದ್, ಎನ್.ಪಿ. ಪುಷ್ಪರಾಜನ್, ನೂರ್ ಅಮೀನಾ, ಶಾಹಿದಾ, ಅಬ್ದುಲ್ಲಾ ಬಿನ್ ಅಮೀನ್, ರತ್ನಾಕರ್ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ಅಬ್ದುಲ್ ಅಝೀಝ್ ಕುದ್ರೋಳಿ ಸ್ವಾಗತಿಸಿದರು. ನಿರ್ದೇಶಕ ಮುನೀರ್ ಅಹ್ಮದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News