ಜೇಷ್ಠತೆ ವಿಸ್ತರಿಸುವ ಕಾಯ್ದೆ ಅನುಷ್ಠಾನಕ್ಕೆ ಒತ್ತಾಯ

Update: 2018-09-24 16:48 GMT

ಬೆಂಗಳೂರು, ಸೆ.24: ರಾಜ್ಯ ನಾಗರಿಕ ಸೇವೆಗಳಲ್ಲಿನ ಹುದ್ದೆಗಳಿಗೆ ಮೀಸಲಾತಿ ಆಧಾರದ ಮೇಲೆ ಭಡ್ತಿ ಹೊಂದಿರುವ ಪರಿಶಿಷ್ಟ ಜಾತಿ, ಪಂಗಡದ ಸರಕಾರಿ ನೌಕರರಿಗೆ ಜೇಷ್ಠತೆಯನ್ನು ವಿಸ್ತರಿಸುವ ಕಾಯಿದೆ 2017ಅನ್ನು ಅನುಷ್ಠಾನಗೊಳಿಸುವಂತೆ ಕರ್ನಾಟಕ ರಾಜ್ಯ ಸರಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಒತ್ತಾಯಿಸಿದೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಡಿ.ಶಿವಶಂಕರ್ ಮಾತನಾಡಿ, ಜೇಷ್ಠತಾ ಪಟ್ಟಿಯನ್ನು ಇಲಾಖೆಗಳು ಪುನರ್ ಪರಿಷ್ಕರಿಸುವಾಗ ಇಲಾಖಾ ಹಂತದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಅಧಿಕಾರಿ, ನೌಕರರನ್ನೊಳಗೊಂಡಂತೆ ಸಮಿತಿಯನ್ನು ರಚಿಸಿ ಜೇಷ್ಠತಾ ಪಟ್ಟಿಯನ್ನು ಪರಿಷ್ಕರಿಸಲು ಸೂಕ್ತ ಆದೇಶ ನೀಡಬೇಕೆಂದು ಆಗ್ರಹಿಸಿದರು.

ಬಿ.ಕೆ.ಪವಿತ್ರ ಪ್ರಕರಣದ ಹಿನ್ನೆಲೆಯಲ್ಲಿ ಹಿಂಭಡ್ತಿ, ಮುಂಭಡ್ತಿ ನೀಡಲು ನಡೆದಿರುವ ಎಲ್ಲ ಇಲಾಖೆಗಳ ಮುಂಭಡ್ತಿ ಸಮಿತಿ ನಡಾವಳಿಗಳನ್ನು ಹಾಗೂ ಸದರಿ ನಡಾವಳಿಗಳ ಮೇಲೆ ಹೊರಡಿಸಿರುವ ಎಲ್ಲ ಆದೇಶಗಳನ್ನು ರದ್ದುಪಡಿಸಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News