ಕಾರು ಢಿಕ್ಕಿ: ಪಾದಾಚಾರಿ ಮೃತ್ಯು

Update: 2018-09-24 17:19 GMT

ಕಾಪು, ಸೆ.24: ಉಳಿಯಾರಗೋಳಿ ಗ್ರಾಮದ ಕೋತಲ್ಕಟ್ಟೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.23ರಂದು ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ನಿವಾಸಿ ಜಗನ್ನಾಥ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಮನೆಗೆ ಹೋಗಲು ಕೋತಲ್ ಕಟ್ಟೆ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಜಗನ್ನಾಥ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News