ಸಂಸದ ಸಿದ್ದೇಶ್ವರ್, ಶಾಸಕ ರವೀಂದ್ರನಾಥ್ ‘ಗೊಡ್ಡೆಮ್ಮೆ’ಗಳು: ಶಾಸಕ ಶಾಮನೂರು ವ್ಯಂಗ್ಯ

Update: 2018-09-24 17:44 GMT

ದಾವಣಗೆರೆ, ಸೆ.24: ಬಿಜೆಪಿಯ ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಒಂದು ರೀತಿಯ ಗೊಡ್ಡೆಮ್ಮೆಗಳಿದ್ದಂತೆ. ಅವು ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಖಾರವಾಗಿ ಟೀಕಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್‌ರಾವ್ ಜಾಧವ್ ಶಾಮನೂರು ಶಿವಶಂಕರಪ್ಪ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ ಶಾಮನೂರು ‘ರಿಜೆಕ್ಟೆಡ್ ಗೂಡ್ಸ್’ಎಂದು ವ್ಯಂಗ್ಯವಾಡಿದ್ದರು. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಖಾರವಾಗಿಯೇ ಉತ್ತರ ನೀಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನಾಯಕರು ಯಾವ ಕೆಲಸ ಮಾಡಿಲ್ಲ. ಬಿಜೆಪಿ ಶಾಸಕರು ಹಾಗೂ ಸಂಸದರು ಗೊಡ್ಡೆಮ್ಮೆಗಳು ಎಂದು ಟೀಕಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಸಚಿವರು ಬರದಿದ್ದರೇನು, ತಾವೇ ಎಲ್ಲವನ್ನೂ ಅಭಿವೃದ್ಧಿ ಮಾಡುತ್ತೇವೆ ಎಂದು ಸಮರ್ಥಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News