ಮಂಡ್ಯ: ರಸ್ತೆ ಅಪಘಾತಕ್ಕೆ ಓರ್ವ ಬಲಿ; ನಾಲ್ವರಿಗೆ ಗಾಯ

Update: 2018-09-24 18:34 GMT

ಮಂಡ್ಯ, ಸೆ.24: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆ ಬದಿ ಮನೆ ಮತ್ತು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದ ಪಟ್ಟಣದ ನಿವಾಸಿ ಮಾದೇಶ(48) ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಸರ್ವಮಂಗಳ, ನಾಗರತ್ನ ಹಾಗೂ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಶೃತಿ ಹಾಗೂ ಮಹದೇವಮ್ಮ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News