​ತೆಂಕನಿಡಿಯೂರು: ಕಾಲೇಜಿನ ವಾರ್ಷಿಕ ಸಂಚಿಕೆ ಬಿಡುಗಡೆ

Update: 2018-09-24 18:42 GMT

ಉಡುಪಿ, ಸೆ.24: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2017-18ನೇ ಸಾಲಿನ ವಾರ್ಷಿಕ ಸಂಚಿಕೆ ‘ಸುದರ್ಶನ’ ಬಿಡುಗಡೆ ಇತ್ತೀಚೆಗೆ ತೆಂಕನಿಡಿಯೂರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಸುದರ್ಶನ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಕಲಾ ಪ್ರತಿಭೆಯನ್ನು ಹೊರತರುವಲ್ಲಿ ವಾರ್ಷಿಕ ಸಂಚಿಕೆಗಳು ಸಹಾಯಕವಾಗುತ್ತವೆ ಎಂದರು.

ಸಂಚಿಕೆಯ ಸಂಪಾದಕ ಪ್ರೊ.ರಾಧಾಕೃಷ್ಣ ಸುದರ್ಶನ ಸಂಚಿಕೆಯನ್ನು ಪರಿಚಯಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್.ಹೆಗ್ಡೆ ವಹಿಸಿದ್ದರು.

ಈ ಸಂದರ್ಭದಲ್ಲಿ ಉಡುಪಿ ಉಪೇಂದ್ರ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲ ಡಾ. ಮಧುಸೂದನ ಭಟ್, ತೆಂಕನಿಡಿಯೂರುಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಪ್ರಸಾದ್ ರಾವ್ ಎಂ., ಪ್ರೊ. ರಾಮಚಂದ್ರ ಪಾಟ್ಕರ್, ದಯಾನಂದ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಧ್ಯಕ್ಷ ಪ್ರಜ್ವಲ್ ಸ್ವಾಗತಿಸಿದರು. ಸ್ವಾತಿ ರಾವ್ ಬಿ. ವಂದಿಸಿದರು. ಡಾ.ದುಗ್ಗಪ್ಪ ಕಜೆಕಾರ್ ಹಾಗೂ ಪ್ರೊ. ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News