ಕೊಹ್ಲಿ, ಚಾನುಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

Update: 2018-09-25 13:48 GMT

ಹೊಸದಿಲ್ಲಿ, ಸೆ.25: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮಹಿಳಾ ವೇಟ್ ಲಿಫ್ಟಿಂಗ್ ವರ್ಲ್ಡ್ ಚಾಂಪಿಯನ್ ಮೀರಾಬಾಯಿ ಚಾನು ಅವರಿಗೆ ಮಂಗಳವಾರ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾಗಿರುವ ರಾಜೀವ್ ಗಾಂಧಿ ಖೇಲ್ ರತ್ನ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ಅರ್ಜುನ ಪ್ರಶಸ್ತಿ ,ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಖೇಲ್ ರತ್ನ  ತಲಾ 7.5 ಲಕ್ಷ ರೂ. ನಗದು , ಪದಕ ಮತ್ತು ಪ್ರಶಸ್ತಿ ಪತ್ರ, ಅರ್ಜುನ ಪ್ರಶಸ್ತಿ ,ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ತಲಾ 5 ಲಕ್ಷ ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿವೆ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಜೋಪ್ರಾ ಸೇರಿದಂತೆ 20 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ , 8 ಮಂದಿಗೆ ದ್ರೋಣಾಚಾರ್ಯ ಮತ್ತು 4 ಮಂದಿ ಧ್ಯಾನ್‌ಚಂದ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News