ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಲು ನಿಯೋಗ: ಎಚ್.ಡಿ.ಕುಮಾರಸ್ವಾಮಿ

Update: 2018-09-25 14:45 GMT

ಬೆಂಗಳೂರು, ಸೆ.25: ಈ ವರ್ಷ ರಾಜ್ಯದ ರೈತರು ಹೆಸರುಕಾಳು ಬೆಳೆಯನ್ನು ಹೆಚ್ಚಾಗಿ ಬೆಳೆದಿದ್ದಾರೆ. ಹೀಗಾಗಿ ಹೆಚ್ಚುವರಿ ಖರೀದಿಗೆ ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸರಕಾರವನ್ನು ಒತ್ತಾಯಿಸಲು ಬುಧವಾರ(ನಾಳೆ) ರಾಜ್ಯ ಸರಕಾರದ ನಿಯೋಗ ಹೊಸದಿಲ್ಲಿಗೆ ತೆರಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಂಗಳವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸಾಲಿನಲ್ಲಿ 1.5ಲಕ್ಷ ಮೆಟ್ರಿಕ್ ಟನ್ ಹೆಸರುಕಾಳು ಬೆಳೆಯಲಾಗಿದೆ. ಆದರೆ, ಕೇಂದ್ರ ಸರಕಾರ ಕೇವಲ 23 ಸಾವಿರ ಮೆಟ್ರಿಕ್ ಟನ್ ಹೆಸರುಕಾಳು ಖರೀದಿಗೆ ಮಾತ್ರ ಸೂಚಿಸಿದೆ. ಇದರಿಂದ ರೈತರಿಗೆ ಯಾವುದೆ ರೀತಿಯಲ್ಲಿ ಅನುಕೂಲವಾಗುವುದಿಲ್ಲ. ರೈತರಿಂದ ಕನಿಷ್ಟ ಒಂದು ಲಕ್ಷ ಮೆಟ್ರಿಕ್‌ಟನ್ ಹೆಸರುಕಾಳು ಖರೀದಿಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಲು ನಾಳೆ ರಾಜ್ಯ ಸರಕಾರದ ನಿಯೋಗ ಹೊಸದಿಲ್ಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News