ಅಪೌಷ್ಟಿಕತೆ ನಿವಾರಣೆಗೆ 'ಪೌಷ್ಟಿಕ ಕರ್ನಾಟಕ' ಯೋಜನೆ ಜಾರಿ: ಜಯಮಾಲಾ

Update: 2018-09-25 14:49 GMT

ಬೆಂಗಳೂರು, ಸೆ.25: ರಾಜ್ಯದಲ್ಲಿರುವ ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪೌಷ್ಟಿಕ ಕರ್ನಾಟಕ ಯೋಜನೆ ಜಾರಿ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಜಯಮಾಲಾ ತಿಳಿಸಿದರು.

ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಕಾಸಸೌಧದಲ್ಲಿ ಆಯೋಜಿಸಿದ್ದ ಪೋಷಣ ಅಭಿಯಾನ ಪೌಷ್ಟಿಕ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೌಷ್ಟಿಕ ಕರ್ನಾಟಕ ಯೋಜನೆಯನ್ನು ಮೊದಲನೆಯ ಹಂತವಾಗಿ ರಾಜ್ಯದ 19 ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ, ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ರಾಜ್ಯದಲ್ಲಿ ವಾಸಿಸುತ್ತಿರುವ ಯಾರೂ ಅಪೌಷ್ಟಿಕತೆಯಿಂದ ನರಳಬಾರದು ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ನವೆಂಬರ್ 1ರಿಂದ ರಾಜ್ಯದಲ್ಲಿ ಮಾತೃಶ್ರೀ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯ ಅನ್ವಯ ಗರ್ಭಿಣಿ ಹಾಗೂ ಬಾಣಂತಿಯರಿಗೆ 6 ಸಾವಿರ ರೂ.ಗೌರವ ಧನ ನೀಡಲಾಗುವುದು. ಹಾಗೂ ಶೀಘ್ರವಾಗಿ ಸೀಮಂತ ಯೋಜನೆ ಜಾರಿ ಮಾಡಲಾಗುವುದು.

-ಜಯಮಾಲಾ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News