ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್: ಆರೋಪಿ ಸೆರೆ

Update: 2018-09-25 15:28 GMT

ಬೆಂಗಳೂರು, ಸೆ.25: ಅಕ್ರಮವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಶೆಡ್‌ನ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಕಗ್ಗದಾಸಪುರದ ಉಮೇದರಂ (24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕಗ್ಗದಾಸನಪುರ ಮುಖ್ಯರಸ್ತೆಯ ರೈಲ್ವೆ ಹಳಿ ಹಿಂಭಾಗದ ಶೆಡ್‌ವೊಂದರಲ್ಲಿ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್‌ಗಳನ್ನು 5 ಕೆಜಿ, 2 ಕೆಜಿ ಇನ್ನಿತರ ಸಣ್ಣ ಸಿಲಿಂಡರ್‌ಗಳಿಗೆ ರೀ ಫಿಲ್ಲಿಂಗ್ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತನಿಂದ 2 ಲಕ್ಷ 30 ಸಾವಿರ ಮೌಲ್ಯದ ಭಾರತ್ ಹಾಗೂ ಇಂಡೇನ್ ಕಂಪೆನಿಯ 131 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News