ಬಾರಮುಲ್ಲಾ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Update: 2018-09-25 16:40 GMT

ಶ್ರೀನಗರ, ಸೆ. 25: ಜಮ್ಮು ಹಾಗೂ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸೋಪೊರೆ ಪಟ್ಟಣದ ಬೊಮಾಯಿ ಪ್ರದೇಶವನ್ನು ಯೋಧರು ಸುತ್ತುವರಿದರು ಹಾಗೂ ಶೋಧ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭ ಉಗ್ರರು ದಾಳಿ ನಡೆಸಿದರು. ಯೋಧರು ಪ್ರತಿದಾಳಿ ನಡೆಸಿದರು. ಪರಿಣಾಮ ಇಬ್ಬರು ಉಗ್ರರು ಹತರಾದರು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರ ಗುರುತು ಹಾಗೂ ಅವರ ಸಂಘಟನೆ ಬಗ್ಗೆ ಇನ್ನಷ್ಟೆ ಖಚಿತಪಡಿಸಿಕೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News