ಭಡ್ತಿ ಮೀಸಲಾತಿ ಕಾಯ್ದೆ ಜಾರಿ ಸಂಬಂಧ ಎರಡು ದಿನದಲ್ಲಿ ಸೂಕ್ತ ಕ್ರಮ: ಸಿಎಂ

Update: 2018-09-25 17:11 GMT

ಬೆಂಗಳೂರು, ಸೆ.25: ಎಸ್ಸಿ, ಎಸ್ಟಿ ಮುಂಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಮುಂದಿನ ಎರಡು ದಿನದೊಳಗೆ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಂಗಳವಾರ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಕೆಂಪೇಗೌಡ ಬಡಾವಣೆಯ ನಿವೇಶನಗಳ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಭಡ್ತಿ ಮೀಸಲಾತಿ ಕಾಯ್ದೆ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಸೂಕ್ತ ತೀರ್ಮಾನ ಕೈಗೊಳ್ಳಲು ವಿಳಂಬ ಆಗುತ್ತಿದೆ ಎಂದರು.

ಭಡ್ತಿ ಮೀಸಲಾತಿ ಕಾಯ್ದೆ ಜಾರಿ ಮಾಡಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಕಳೆದ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಮುಂದಿನ ಎರಡು ದಿನದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News