ಸರಕಾರಿ ಜಾಲತಾಣಗಳಲ್ಲಿ ಕನ್ನಡ ಕಡ್ಡಾಯ: ಉದಾಸೀನ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Update: 2018-09-25 17:19 GMT

ಬೆಂಗಳೂರು, ಸೆ.25: ಸರಕಾರಿ ಜಾಲತಾಣಗಳಲ್ಲಿ ಕನ್ನಡ ಬಳಕೆ ಮಾಡಲು ಉದಾಸೀನ ತೋರುತ್ತಿರುವ, ಆಶಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌ಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಕನ್ನಡ ಉಳಿಯಬೇಕಾದರೆ ಶಿಷ್ಟತೆ ಪ್ರಕಾರ ಸರಕಾರಿ ಜಾಲತಾಣಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಬೇಕು ಎಂದು ಪ್ರಾಧಿಕಾರ ಎಲ್ಲ ಇಲಾಖೆಗಳ ಜಾಲತಾಣಗಳ ವರದಿಯನ್ನು ನೀಡಲಾಗಿದೆ. ಈ ವರದಿ ಅನ್ವಯ 71 ಇಲಾಖೆಗಳು ತಮ್ಮ ಜಾಲತಾಣಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಿವೆ. ಆದರೆ, 32 ಇಲಾಖೆಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ.

ಕನ್ನಡ ಬಳಕೆ ಮಾಡದಿದ್ದರಿಂದಾಗಿ ಆಡಳಿತ ಯಂತ್ರದ ಮುಖ್ಯಸ್ಥರುಗಳ ಉದಾಸೀನದಿಂದಾಗಿ ಸರಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ಪಾರದರ್ಶಕ ರೀತಿಯಲ್ಲಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಆಡಳಿತ ವೈಫಲ್ಯಗಳಿಗೆ ಕಾರಣವಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News