ಹನೂರು: ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ಒಂಟಮಾಲಪುರ ರಸ್ತೆ

Update: 2018-09-25 17:43 GMT

ಹನೂರು,ಸೆ.25: ಹನೂರು ಪಟ್ಟಣ ಸೇರಿದಂತೆ ಸುತ್ತಮುತ್ತ ತಡರಾತ್ರಿ ಸುರಿದ ಮಳೆಗೆ ಪಟ್ಟಣದ ಹೊರವಲಯದಲ್ಲಿರುವ ಒಂಟಮಾಲಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ.

ಪಟ್ಟಣದ ಹೊರವಲಯದಲ್ಲಿರುವ ರಸ್ತೆಯಲ್ಲಿ ಪ್ರತಿ ದಿನ ಹಲವು ವಾಹನಗಳು ಸಂಚರಿಸುತ್ತದೆ. ಆದರೆ ಇಲ್ಲಿನ ರಸ್ತೆಯು ಮಳೆಗಾಲ ಬಂತೆಂದರೆ ಸಂಪೂರ್ಣ ಕೆಸರು ಗದ್ದೆಯಂತಾಗುತ್ತದೆ. ಕಳೆದ ಎರಡು ದಿನಗಳಲ್ಲಿ ಸುರಿದ ಮಳೆಗೆ ರಸ್ತೆಯಲ್ಲಾ ಕೆಸರುಮಯವಾಗಿ ಇಲ್ಲಿನ ಮಕ್ಕಳು ಶಾಲೆಗೆ ತೆರಳಲು, ಜೊತೆಗೆ ಸಾರ್ವಜನಿಕರು ಓಡಾಡಲು ತುಂಬಾ ತೊಂದರೆ ಆಗಿದ್ದು, ಅವ್ಯವಸ್ಥೆಯ ಆಗರವಾಗಿರುವ ಈ ರಸ್ತೆಯ ಸಂಚಾರ ಕಷ್ಟಕರವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಈ ಭಾಗದ ನಿವಾಸಿಗಳು ಹಾಗೂ ರೈತರು ನಿರ್ಭೀತಿಯಿಂದ ಸಂಚರಿಸುವಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಹನೂರಿನಿಂದ ಒಂಟಮಾಲಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಣ್ಣಿನ ರಸ್ತೆಯಾಗಿದ್ದು, ಮಳೆ ಬಂತೆಂದರೆ ಕೆಸರು ಗದ್ದೆಯಂತಾಗಿರುವುದರಿಂದ ಮಕ್ಕಳು ಶಾಲೆಗೆ ಹೋಗಲು ಮತ್ತು ಇಲ್ಲಿನ ರೈತರು ಸಂಜೆ ಮತ್ತು ಬೆಳಗ್ಗೆ ಹನೂರಿನ ಡೈರಿಗೆ ಹಾಲನ್ನು ಹೋಗಲು ಹರಸಾಹಸವೇ ಪಡಬೇಕು.

ಕಾರ್ತಿಕ್, ಸ್ಥಳೀಯ ನಿವಾಸಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News