×
Ad

ಕೆ.ಆರ್.ಪೇಟೆ: ರೈತ ಮಹಿಳೆ ಆತ್ಮಹತ್ಯೆ

Update: 2018-09-26 00:07 IST

ಕೆ.ಆರ್.ಪೇಟೆ, ಸೆ.25: ಸಾಲಬಾಧೆ ತಾಳಲಾರದೆ ರೈತ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಿವಂಗತ ದೇವೇಗೌಡರ ಪತ್ನಿ ಜಯಮ್ಮ(50) ಆತ್ಮಹತ್ಯೆ ಮಾಡಿಕೊಂಡಿದ್ದು, ಇವರಿಗೆ 2 ಎಕರೆ ಜಮೀನಿದೆ. ಕೃಷಿಗಾಗಿ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News