ರಾಜ್ಯದ 23 ಜಿಲ್ಲೆಗಳ 86 ತಾಲೂಕುಗಳು ಬರಪೀಡಿತ

Update: 2018-09-26 05:23 GMT

ಬೆಂಗಳೂರು, ಸೆ.26: ರಾಜ್ಯದಲ್ಲಿ 23 ಜಿಲ್ಲೆಗಳ 86 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸರಕಾರ ಆದೇಶಿಸಿದೆ.

ಚಿಕ್ಕಮಗಳೂರು, ಹಾಸನ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳ 86 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಈ ಸಮಿತಿಯ ಸಭೆಯು ಸೆ.11ರಂದು ನಡೆದಿದೆ.

ಬರಪೀಡಿತ ತಾಲೂಕುಗಳಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸರಕಾರ ಸೂಚಿಸಿದೆ.

ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಒಟ್ಟು ವಾಡಿಕೆಗಿಂತ ಶೇ.2ರಷ್ಟು ಅಧಿಕ ಮಳೆಯಾಗಿದೆ. ಆದರೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.31ರಷ್ಟು ಕಡಿಮೆ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.12ರಷ್ಟು ಕಡಿಮೆ ಮಳೆಯಾಗಿದೆ. ಅದೇರೀತಿ ಮುಂಗಾರು ಹಂಗಾಮಿನಲ್ಲಿ ನಿಗದಿಪಡಿಸಲಾಗಿದ್ದ 74 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ 62.88 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಸಾಧ್ಯವಾಗಿದೆ. ಬಿತ್ತನೆಯಾದ ಪ್ರದೇಶದಲ್ಲಿ ತೇವಾಂಶದ ಕೊರತೆಯಿಂದ ನಷ್ಟ ಉಂಟಾಗಿದೆ ಎಂಬುದನ್ನು ಉಪಸಮಿತಿ ಕಂಡುಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News