ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ: ಸುಪ್ರೀಂಕೋರ್ಟ್

Update: 2018-09-26 05:37 GMT

 ಹೊಸದಿಲ್ಲಿ, ಸೆ.26: ಎಸ್‌ಸಿ-ಎಸ್‌ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ. ತೀರ್ಪು ಪರಿಶೀಲಿಸುವ ಅಗತ್ಯವೂ ಇಲ್ಲ ಆದರೆ, ಬಡ್ತಿ ಮೀಸಲಾತಿ ರಾಜ್ಯಗಳ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.

2006ರ ಎಂ.ನಾಗರಾಜ್ ಪ್ರಕರಣದ ತೀರ್ಪು ಮರು ಪರಿಶೀಲನೆ ಅಗತ್ಯವಿಲ್ಲ. ಹಿಂದುಳಿದವರು ಎಂದು ಹೇಳಲು ಮತ್ತೆ ಮಾಹಿತಿ ಸಂಗ್ರಹಿಸುವ ಅಗತ್ಯವಿಲ್ಲ. ಈ ಪ್ರಕರಣವನ್ನು 7 ನ್ಯಾಯಮೂರ್ತಿಗಳ ಪೀಠಕ್ಕೆ ಒಪ್ಪಿಸುವುದಿಲ್ಲ ಎಂದು ಐವರು ಸದಸ್ಯರ ಸುಪ್ರೀಂಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News