ಮಂಗಳೂರು: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Update: 2018-09-26 06:00 GMT

ಮಂಗಳೂರು, ಸೆ.26: ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಉರ್ವ ಚಿಲಿಂಬಿ ಮಲರಾ ದೈವಸ್ಥಾನ ಸಮೀಪದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದ ಗೋವಾ ಮೂಲದ ನೇವಿಲ್ ಸಲ್ದಾನ ಫೆರ್ನಾಂಡಿಸ್(17) ಆತ್ಮಹತ್ಯೆ ಮಾಡಿಕೊಂಡವರು. ಇವರು ಸೋಮವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News