ರಾ.ಹೆ. ದುರಸ್ತಿಪಡಿಸಲು, ಟೋಲ್ ಗೇಟ್ ಮುಚ್ಚಲು ಆಗ್ರಹ: ಕೂಳೂರಿನಿಂದ ಪಾದಯಾತ್ರೆಗೆ ಚಾಲನೆ

Update: 2018-09-26 06:45 GMT

ಮಂಗಳೂರು, ಸೆ.26: ಸುರತ್ಕಲ್ ಎನ್ಐಟಿಕೆ ಸಮೀಪ ಇರುವ ಟೋಲ್ ಗೇಟ್ ಮುಚ್ಚಬೇಕು, ನಂತೂರು ಸುರತ್ಕಲ್ ಹೆದ್ದಾರಿ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ 'ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ' ಹಮ್ಮಿಕೊಂಡಿರುವ ಪಾದಯಾತ್ರೆಗೆ ಕೂಳೂರಿನಲ್ಲಿ ಬುಧವಾರ ಚಾಲನೆ ನೀಡಲಾಯಿತು.

 ಟೋಲ್ ಗೇಟ್ ವಿರೋಧಿ‌ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮನಪಾ ಸಧಸ್ಯರಾದ ದಯಾನಂದ ಶೆಟ್ಟಿ ರೇವತಿ ಪುತ್ರನ್, ಪುರುಷೋತ್ತಮ ಚಿತ್ರಾಪುರ, ಜೋಕಟ್ಟೆ ಪಂಚಾಯತ್ ಅಧ್ಯಕ್ಷೆ ಪ್ರಸಿಲ್ಲಾ ಮೊಂತೆರೊ, ಬಿ.ಕೆ.ಇಮ್ತಿಯಾಝ್, ಸುನೀಲ್ ಕುಮಾರ್ ಬಜಾಲ್, ಸಂತೋಷ್ ಬಜಾಲ್ ಯಾದವ ಶೆಟ್ಟಿ, ಸಂತೋಷ್ ಬಜಾಲ್, ಮೂಸಬ್ಬ ಪಕ್ಷಿಕೆರೆ, ಶ್ರೀನಾಥ್ ಕುಲಾಲ್, ಅಯ್ಯೂಬ್ ಕೂಳೂರು, ದಿನೇಶ್ ಕುಂಪಲ ಮತ್ತಿತರರ ಗಣ್ಯರು ಈ ಪ್ರತಿಭಟನಾ ಧರಣಿಯ ನೇತೃತ್ವ ವಹಿಸಿದ್ದಾರೆ.

ಪಾದಯಾತ್ರೆಯು ಟೋಲ್ ಗೇಟ್ ಸಮೀಪ ಪ್ರತಿಭಟನಾ ಸಮಾವೇಶದ ಮೂಲಕ ಪಾದಯಾತ್ರೆ ಸಮಾರೋಪಗೊಳ್ಳಲಿದೆ.

ಸುರತ್ಕಲ್ ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘ, ಕಿನ್ನಿಗೋಳಿ ವಲಯ ಲಾರಿ ಮಾಲಕರ ಸಂಘ, ತ್ರಿಚಕ್ರ ಟೆಂಪೊ ಚಾಲಕರ ಮಾಲಕರ ಸಂಘ ಸುರತ್ಕಲ್, ಗೂಡ್ಸ್ ಟೆಂಪೊ ಚಾಲಕರ ಸಂಘ ಸುರತ್ಕಲ್, ಸುರತ್ಕಲ್ ಆಟೋ ಚಾಲಕರ ಯೂನಿಯನ್, ಆನ್ ಲೈನ್ ಟ್ಯಾಕ್ಸಿ ಓನರ್ಸ್ ಅಸೋಸಿಯೇಶನ್, ನಾಗರಿಕ ಸಮಿತಿ ಕುಳಾಯಿ, ಗೋಪಾಲಕೃಷ್ಣ ಭಜನಾ ಮಂದಿರ ಉರುಂದಾಡಿ, ನ್ಯೂ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ, ಟ್ರಾನ್ಸ್ ಪೋರ್ಟ್ ವರ್ಕರ್ಸ್ ಯೂನಿಯನ್, ಸುರತ್ಕಲ್, ಜಯ-ಕರ್ನಾಟಕ ಸುರತ್ಕಲ್, ಡಿವೈಎಫ್ಐ ಸುರತ್ಕಲ್ ವಲಯ ಸಹಿತ ಹಲವು ಸಂಘಟನೆಗಳ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News