ಯುಪಿಸಿಎಲ್ ವಿದ್ಯುತ್ ಸ್ಥಾವರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ

Update: 2018-09-26 07:48 GMT

ಪಡುಬಿದ್ರೆ, ಸೆ.26: ಯುಪಿಸಿಎಲ್ ವಿದ್ಯುತ್ ಸ್ಥಾವರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಒಡೆತನದ ಯುಪಿಸಿಎಲ್ ವಿದ್ಯುತ್ ಸ್ಥಾವರದಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದಿಂದ ಹಾನಿಯಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News