ಪಡುಬಿದ್ರೆ: ಯುಪಿಸಿಎಲ್ ವಿದ್ಯುತ್ ಘಟಕದಲ್ಲಿ ಟ್ರಾನ್ಸ್ ಫಾರ್ಮರ್ ಸ್ಟೋಟ

Update: 2018-09-26 14:08 GMT

ಪಡುಬಿದ್ರೆ, ಸೆ. 26: ಅದಾನಿ ಒಡೆತನದ ಯುಪಿಸಿಎಲ್ ವಿದ್ಯುತ್ ಸ್ಥಾವರದ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಎರಡನೇ ಘಟಕದ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ.

ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರದಲ್ಲಿ ಬುಧವಾರ ಬೆಳಗ್ಗೆ ಎರಡನೇ ಘಟಕದಲ್ಲಿ ತಾಂತ್ರಿಕ ಸಮಸ್ಯೆಯಿಂದ ಈ ಘಟನೆ ನಡೆದಿದೆ. ಇದರಿಂದ 600 ಮೆ.ವಾ. ಸಾಮರ್ಥ್ಯದ ಎರಡನೇ ಘಟಕ ಸಂಪೂರ್ಣ ಸ್ಥಗಿತಗೊಂಡಿದೆ. ಮೊದಲ ಘಟಕದಲ್ಲಿ ಉತ್ಪಾದನೆ ನಡೆಯುತ್ತಿದೆ.

ಈ ಸಂದರ್ಭ ಕಂಪೆನಿಯ ಸಿಬ್ಬಂದಿ ಕರ್ತವ್ಯದಲ್ಲಿದ್ದರೂ ಯಾವುದೇ ಪ್ರಾಣ, ಹಾನಿಯಾಗಿಲ್ಲ. ಘಟನೆಯಿಂದ ಅಪಾರ ನಷ್ಟ ಉಂಟಾಗಿದ್ದು, ಯೋಜನೆಯ ಉನ್ನತ ತಾಂತ್ರಿಕ ಅಧಿಕಾರಿಗಳು ಬಂದು ಪರಿಶೀಲಿಸಿದ ಬಳಿಕವಷ್ಟೇ ನಷ್ಟದ ಅಂದಾಜು ಗೊತ್ತಾಗಲಿದೆ ಎಂದು ತಿಳಿದುಬಂದಿದೆ.

ಈ ಭಾರಿ ಉತ್ತಮ ಮಳೆ ಉಂಟಾಗಿರುವುದರಿಂದ ಜಲಾಶಯಗಳು ಭರ್ತಿಯಾಗಿತ್ತು. ಇದರಿಂದ ರಾಜ್ಯ ಸರ್ಕಾರ ವಿದ್ಯುತ್ ಖರೀದಿಯನ್ನು ಮಾಡದೆ ಇರುವುದರಿಂದ  ಜೂನ್‍ನಿಂದ ಆಗಸ್ಟ್ ವರೆಗೆ ಯುಪಿಸಿಎಲ್‍ನ ಎರಡು ಘಟಕಗಳ ಉತ್ಪಾದನೆ ನಿಲ್ಲಿಸಲಾಗಿತ್ತು. ಸೆಪ್ಟೆಂಬರ್ ನಲ್ಲಿ ವಿದ್ಯುತ್ ಉತ್ಪಾದನೆ ಪ್ರಾರಂಭಿಸಲಾಗಿತ್ತು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News