ಕಲಾಪಗಳ ನೇರ ಪ್ರಸಾರಕ್ಕೆ ಸುಪ್ರೀಂ ಅನುಮತಿ

Update: 2018-09-26 14:11 GMT

ಹೊಸದಿಲ್ಲಿ, ಸೆ.26: ಸುಪ್ರೀಂಕೋರ್ಟ್‌ನಲ್ಲಿ ನಡೆಯುವ ಕಾರ್ಯಕಲಾಪಗಳ ನೇರ ಪ್ರಸಾರಕ್ಕೆ ಅನುಮತಿ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಕಾರ್ಯಕಲಾಪಗಳ ನೇರ ಪ್ರಸಾರಕ್ಕೆ ಅಗತ್ಯವಿರುವ ನಿಯಮಗಳನ್ನು ರೂಪಿಸುವಂತೆ ಮೂವರು ಸದಸ್ಯರ ನ್ಯಾಯಪೀಠ ಸೂಚಿಸಿದೆ. ಇದರಿಂದ ಜನತೆ ನ್ಯಾಯಾಲಯದ ಕಲಾಪವನ್ನು ನೇರವಾಗಿ ವೀಕ್ಷಿಸಬಹುದು. ಅಲ್ಲದೆ ನ್ಯಾಯಾಲಯದಲ್ಲಿ ಏನು ನಡೆಯಿತು ಎಂದು ಇನ್ನೊಬ್ಬರಿಂದ ತಿಳಿದುಕೊಳ್ಳುವ ಅಗತ್ಯ ಬರುವುದಿಲ್ಲ. ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬಹುದು ಎಂದು ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರ, ನ್ಯಾಯಾಧೀಶರಾದ ಡಿ.ವೈ.ಚಂದ್ರಚೂಡ್ ಹಾಗೂ ಎ.ಎಂ.ಖಾನ್ವಿಳ್ಕರ್ ಅವರಿದ್ದ ನ್ಯಾಯಪೀಠ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News