ವಿಶ್ವ ವಿಕಲಚೇತನರ ದಿನಾಚರಣೆ: ವಿಕಲಚೇತನ ಸಂಸ್ಥೆಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-09-26 14:35 GMT

ಬೆಂಗಳೂರು, ಸೆ.26: ವಿಶ್ವ ಸಂಸ್ಥೆಯ ನಿರ್ದೇಶನದಂತೆ ಪ್ರತಿ ವರ್ಷ ಡಿ.3ರಂದು ವಿಶ್ವ ಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸರಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ 15 ವ್ಯಕ್ತಿಗಳು, ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ 8 ಸಂಸ್ಥೆಗಳು, ವಿಶಿಷ್ಟ ಸಾಧನೆಗೈದಿರುವ 2 ಸಂಸ್ಥೆಗಳು ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ 5 ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ತಮ್ಮ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ಇಲಾಖೆಯ www.welfareofdisabled.kar.nic.in / www.dwdsc. kar.nic.in  ವೆಬ್‌ಸೈಟ್‌ನಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅ.25ರೊಳಗೆ ಸಂಬಂಧಿಸಿದ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಅಧಿಕೃತ ಪ್ರಟಕಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News