ಹನೂರು: ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟ

Update: 2018-09-26 15:33 GMT

ಹನೂರು,ಸೆ.26: ನಮ್ಮ ಜಿಲ್ಲೆಯ ಕ್ರೀಡಾಪಟುಗಳು ಈ ಹಿಂದೆ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದು, ಅದೇ ರೀತಿ ಈ ಬಾರಿಯೂ ನಮ್ಮ ಜಿಲ್ಲೆಯಿಂದ ಉತ್ತಮ ಕ್ರೀಡಾಪಟುಗಳು ಆಯ್ಕೆಯಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳಕು ಚೆಲ್ಲಬೇಕು ಎಂದು ಶಾಸಕ ಆರ್.ನರೇಂದ್ರ ರಾಜುಗೌಡ ತಿಳಿಸಿದರು.

ಪಟ್ಟಣದ ಮಲೈಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಾಮರಾಜನಗರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಚಾಮರಾಜನಗರ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹನೂರು, ದೈಹಿಕ ಶಿಕ್ಷಣ ಸಂಘ ಚಾಮರಾಜನಗರ ಜಿಲ್ಲೆ ಇವರ ಆಶ್ರಯದಲ್ಲಿ ನಡೆದ 2018ರ ಸಾಲಿನ ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನು ಬಿಂಬಿಸುತ್ತದೆ ಎಂದರು.

ನಮ್ಮ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ನಮ್ಮ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಈ ವರ್ಷ ವಯೋನಿವೃತ್ತಿ ಹೊಂದುತ್ತಿರುವ ಗುಂಡ್ಲುಪೇಟೆ ತಾಲೂಕಿನ ಪುಟ್ಟಸ್ವಾಮಿ ಮತ್ತು ಹನೂರಿನ ಪರಗೂಷನ್ ರನ್ನು ಸನ್ಮಾನಿಸಿದರು.

ಸಮಾರಂಭದಲ್ಲಿ ಮಕ್ಕಳಿಗೆ ಮತ್ತು ಶಿಕ್ಷಕರಿಗೆ ಪ್ರತ್ಯೇಕ ಉಪಹಾರದ ವ್ಯವಸ್ಥೆಯನ್ನು ಆಯೋಜಿಸಿದ್ದ ಪಟ್ಟಣದ ಮಹದೇಶ್ವರ ಬೋರ್‍ವೇಲ್ಸ್ ನ ಆನಂದ್ ಮತ್ತು ಹನೂರು ಟೌನ್ ಅಧ್ಯಕ್ಷ ಸತೀಶ್ ಹಾಗೂ ಒಕ್ಕಲಿಗ ಯುವ ಸಮಿತಿ ಅಧ್ಯಕ್ಷ ಸಂತೋಷ್, ಶಿವು, ರಘು, ಉಮೇಶ್ ಸುನೀಲ್, ಇನ್ನಿತರರನ್ನು ಗೌರವಿಸಿ ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯ ಬಸವಾರಜು, ಮರಗದಮಣಿ, ಲೇಖಾರವಿಕುಮಾರ್ ತಾಪಂ ಅಧ್ಯಕ್ಷ ರಾಜು, ಉಪಾಧ್ಯಕ್ಷ ಲತಾರಾಜಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಜವಾದ್‍ ಅಹಮದ್, ಸದಸ್ಯ ರಾಜೇಂದ್ರ , ರೋಟರಿ ಅಧ್ಯಕ್ಷ ಗಿರೀಶ್ ಮುಖಂಡರಾದ ಗಿರೀಶ್, ಬಿಇಒ ಟಿಆರ್ ಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಜಾರ್ಚ್ ಪಿಲೀಪ್ ಹಾಗೂ ದೈಹಿಕ ಶಿಕ್ಷಕ ಸೆಂದಿಲ್ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News