ಚೆಮ್ಮನ್ನೂರು ಜ್ಯೂವೆಲರ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ: ಕಡತಗಳು, ಪೀಠೋಪಕರಣಗಳು ಬೆಂಕಿಗಾಹುತಿ

Update: 2018-09-27 13:22 GMT

ಬೆಂಗಳೂರು, ಸೆ.27: ನಗರದ ಟೌನ್‌ಹಾಲ್ ಸಮೀಪದ ಯೂನಿಟಿ ಕಟ್ಟಡದಲ್ಲಿರುವ ಚೆಮ್ಮನ್ನೂರ್ ಜ್ಯೂವೆಲರ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಗುರುವಾರ ಬೆಳ್ಳಂಬೆಳಗ್ಗೆ ಕಟ್ಟಡದ ಮೇಲಂತಸ್ತಿನಲ್ಲಿರುವ ಆಫೀಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಟ್ಟಡದಲ್ಲಿನ ಕಡತಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಅಗ್ನಿ ಅವಘಡದ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News